ಚಿತ್ರದುರ್ಗ: ಕಾಡಾನೆ ದಾಳಿಗೆ ರೈತರೋರ್ವರು ಮೃತಪಟ್ಟಿರುವ ಘಟನೆ ಹೊಳಲ್ಕೆರೆ ತಾಲೂಕು ತಾಳಿಕಟ್ಟೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮೃತರನ್ನು ತಾಳಿಕಟ್ಟೆ ಗ್ರಾಮದ ನಿವಾಸಿ ಗಾಳೆಪ್ಪ (45) ಎಂದು ಗುರುತಿಸಲಾಗಿದೆ.
ಕಾಡಾನೆದಾಳಿಯಿಂದ ಶುಕ್ರವಾರ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ.
ಗಾಳೆಪ್ಪ ಅವರು ಜಮೀನಿನಲ್ಲಿ ಕೆಲಸ ಮಾಡುವಾಗ ಗಾಳೆಪ್ಪನನ್ನು ಆನೆ ತುಳಿದಿದ್ದರಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ಇಂದು ಬೆಳಗ್ಗೆ ಗಾಳೆಪ್ಪ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

