ದಿಲ್ಲಿ: ಇಲ್ಲಿನ ಅಕ್ಬರ್ ರೋಡಿನಲ್ಲಿರುವ ಕಾಂಗ್ರಸ್ ನ ಮುಖ್ಯ ಕಚೇರಿಯಲ್ಲಿ ನಡೆದ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಗಾಂಧಿ ಕುಟುಂಬದ ಆರನೇ ವ್ಯಕ್ತಿ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ಶನಿವಾರ ಸ್ವೀಕರಿಸಿದ್ದಾರೆ.
ಈ ವೇಳೆ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಎಂ.ರಾಮಚಂದ್ರನ್ ಅವರು ರಾಹುಲ್ ಗಾಂಧಿ ಅವರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಮಾಣ ಪತ್ರ ಹಸ್ತಾಂತರಿಸಿದ್ದಾರೆ.
ದೇಶದಲ್ಲಿ ಕಾಂಗ್ರೆಸ್ ಅನ್ನು ಮುನ್ನಡೆಸಿದ್ದ ಸೋನಿಯಾ ಗಾಂಧಿ ಅವರು ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಕಾರ್ಯಕ್ರಮದಲ್ಲಿ 3000 ಕ್ಕೂ ಅಧಿಕ ಗಣ್ಯರು ಭಾಗವಹಿಸಿದ್ದರು.
“ನನ್ನ ಪಾತ್ರ ಇನ್ನು ಮುಂದೆ ನಿವೃತ್ತಿಯಾಗುದುವು” ಎಂದು ಶುಕ್ರವಾರ ಸೋನಿಯಾ ಗಾಂಧಿ ಅವರು ಸುದ್ದಿಗಾರರೊಂದಿಗೆ ಹೇಳಿಕೆ ನೀಡಿದ್ದು, ಪಕ್ಷದ ನಾಯಕರಲ್ಲಿ ಭಾರೀ ಕೋಲಾಹಲ ಮೂಡಿತ್ತು. ಈ ಬಗ್ಗೆ ಶನಿವಾರ ಪ್ರತಿಕ್ರಿಯೆ ನೀಡಿದ್ದ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ” ಸೋನಿಯಾ ಗಾಂಧಿ ಅವರು ಪಕ್ಷಕ್ಕೆ ತಮ್ಮ ಅನುಭವವನ್ನು ಧಾರೆ ಎರೆಯಲಿದ್ದು, ಮಾರ್ಗದರ್ಶನ ಮಾಡಲಿದ್ದಾರೆ. ಸಾರ್ವಜನಿಕ ಜೀವನದಿಂದ ಅವರು ದೂರವಾಗುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟ ಪಡಿಸಿದ್ದಾರೆ.

