787

ಬೆಳಗಾವಿ: ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾದ ಪರಿಣಾಮ ಪೊಲೀಸ್​ ಸಿಬ್ಬಂದಿ ಗಾಯಗೊಂಡಿರುವ ಘಟನೆ ಸೋಮವಾರ ತಡ ರಾತ್ರಿ ನಗರದಲ್ಲಿ ನಡೆದಿದೆ.

ಡಿವೈಎಸ್ಪಿ ಶಂಕರ ಮಾರಿಹಾಳ, ಪಿಎಸ್ಸೈ ಸೌಧಾಗರ ಗಾಯಗೊಂಡವರೆಂದು ಗುರುತಿಸಲಾಗಿದೆ.

858

ಇಲ್ಲಿನ ಖಡಕ್ ಗಲ್ಲಿಯಲ್ಲಿ ಒಂದು ಕೋಮಿನವರು ಕಲ್ಲು ತೂರಾಟ ನಡೆಸಿದ್ದಾರೆಂದು ಪ್ರತಿಯಾಗಿ ಮತ್ತೊಂದು ಕೋಮಿನವರು ಕಲ್ಲು ತೂರಾಟ ನಡೆಸಿದ ಪರಿಣಾಮ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಇದರಿಂದ ಡಿವೈಎಸ್ಪಿ ಶಂಕರ ಮಾರಿಹಾಳ, ಪಿಎಸ್ಸೈ ಸೌಧಾಗರ ಸೇರಿದಂತೆ ಇತರೆ ಪೋಲೀಸರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಕಿಡಿಕೇಡಿಗಳು ದ್ವಿಚಕ್ರ ವಾಹನಗಳನ್ನು ಜಖಂಗೊಳಿಸಿ ಬೆಂಕಿ ಹಚ್ಚಲಾಗಿದೆ. ಗಲಭೆ ನಿಯಂತ್ರಿಸಲು ನೂರಾರು ಪೋಲೀಸರು ಸ್ಥಳಕ್ಕೆ  ಧಾವಿಸಿ ಲಾಠಿ ಪ್ರಹಾರ ನಡೆಸಿ ಬಳಿಕ ಟಿಯರ್ ಗ್ಯಾಸ್ ಸಿಡಿಸಿ ಉದ್ರಿಕ್ತರನ್ನು ಚದುರಿಸಿದ್ದಾರೆ. ಗಲಭೆಗೆ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಡಿಸಿಪಿಗಳಾದ ಸೀಮಾ ಲಾಟ್ಕರ್, ಅಮರನಾಥ್ ರೆಡ್ಡಿ ಭೇಟಿ ನೀಡಿದ್ದಾರೆ.

6363

By Suddi9

Leave a Reply

Your email address will not be published. Required fields are marked *