ಕಲಬುರಗಿ: ಅಪರಿಚಿತ ವೃದ್ಧನೋರ್ವರು ರೈಲು ಹಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಹಾಬಾದ್ ಮಡ್ಡಿ ಬಳಿ ಇರುವ ರೈಲ್ವೆ ಹಳಿಯಲ್ಲಿ ಮಂಗಳವಾರ ನಡೆದಿದೆ.

ಮೃತರನ್ನು  70 ವರ್ಷದ ವೃದ್ಧ ಎಂದು ಗುರುತಿಸಲಾಗಿದ್ದು, ವಿಳಾಸ ತಿಳಿದು ಬಂದಿಲ್ಲ.

ಮೃತ ವೃದ್ಧ ಹಳಿಯಲ್ಲಿ ಬಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತುಂಬುತ್ತಿದ್ದ ವೇಳೆ ರೈಲಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ವಾಡಿ ರೈಲ್ವೆ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By Suddi9

Leave a Reply

Your email address will not be published. Required fields are marked *