ಯುವಾ ಬ್ರಿಗೇಡ್‍ನಿಂದ ಆನ್‍ಲೈನ್ ಅರ್ಜಿ ಸಲ್ಲಿಕೆಗೆ ತಾತ್ಕಾಲಿಕ ಸಹಾಯ ಕೇಂದ್ರ
ಮಂಗಳೂರು: ಭಾರತೀಯ ಸೈನ್ಯಕ್ಕೆ ಸೇರ ಬಯಸುವ ಯುವಕರಿಗೆ ಸೇನಾ ನೇಮಕಾತಿ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಆನ್‍ಲೈನ್ ಅರ್ಜಿ ಸಲ್ಲಿಕೆಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ ಯುವಾ ಬ್ರಿಗೇಡ್ ವತಿಯಿಂದ ಮಂಗಳೂರಿನ ವಿ.ಟಿ. ರಸ್ತೆಯಲ್ಲಿರುವ ವಿವೇಕ್ ಟ್ರೇಡರ್ಸ್‍ನಲ್ಲಿ ತಾತ್ಕಾಲಿಕ ಸಹಾಯ ಕೇಂದ್ರ ತೆರೆಯಲಾಗಿದೆ.
ಡಿ. 24ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಹಾಯಕೇಂದ್ರ ಕಾರ್ಯ ನಿರ್ವಹಿಸಲಿದೆ. 10ನೇ ತರಗತಿ ಅಂಕ ಪಟ್ಟಿ ಹಾಗೂ ಪಾಸ್ ಪೋರ್ಟ್ ಗಾತ್ರದ ಭಾವಚಿತ್ರವನ್ನು ತಂದು ಆನ್‍ಲೈನ್ ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರವನ್ನು ಪಡೆದುಕೊಳ್ಳಬೇಕು. (ರ್ಯಾಲಿಗೆ ತೆರಳಲು ಸ್ವೀಕೃತಿ ಪತ್ರ ಕಡ್ಡಾಯ). ಗ್ರಾಮೀಣ ಪ್ರದೇಶದಲ್ಲಿರುವ, ಇಂಟರ್ನೆಟ್ ವ್ಯವಸ್ಥೆ ಇಲ್ಲದ ಆಸಕ್ತ ಅಭ್ಯರ್ಥಿಗಳು ಈ ಸಹಾಯ ಕೇಂದ್ರದ ಉಪಯೋಗ ಪಡೆದುಕೊಳ್ಳಬಹುದು.
ಜ. 16ರಿಂದ 21ರವರೆಗೆ ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ, ವಿಜಯಪುರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ, ಸ್ವೀಕೃತಿ ಪತ್ರದೊಂದಿಗೆ ರ್ಯಾಲಿಗೆ ತೆರಳಬೇಕು. ಆನ್‍ಲೈನ್ ಅರ್ಜಿ ಸಲ್ಲಿಕೆಗೆ ಡಿ. 31 ಕೊನೆಯ ದಿನಾಂಕವಾಗಿದೆ ಎಂದು ಯುವಾ ಬ್ರಿಗೇಡ್ ಕಾರ್ಯಕರ್ತ ಭಾಸ್ಕರ್ ಮಂಗಳೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
