ವಿಟ್ಲ: ಇಲ್ಲಿನ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬುಧವಾರ ನಡೆಯಿತು.
ಈ ವೇಳೆ ಸಭಾಧ್ಯಕ್ಷತೆ ವಹಿಸಿ ಮಾತನಾಡಿದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ಜತೆ ಕಾರ್ಯದರ್ಶಿ ಫಾ.ಎರಿಕ್ ಕ್ರಾಸ್ತಾ, ಓರ್ವ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸಲಿದ್ದು, ಆದ್ದರಿಂದ ಪೊಷಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಅದರಂತೆ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಜತೆ ಶ್ರದ್ಧೆ ಮತ್ತು ಶಿಸ್ತನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವಿಟ್ಲ ಸುರಕ್ಷಾ ಹೆಲ್ತ್ ಸೆಂಟರಿನ ವೈದ್ಯಾಧಿಕಾರಿ ಡಾ. ಗೀತಪ್ರಕಾಶ್, ಉಜಿರೆ ಎಸ್ ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಸ್ ಸಂಶುದ್ದೀನ್ ಹಾಗೂ ಸಿಆರ್ ಪಿ ವಿಟ್ಲ ರವಿಪ್ರಸಾದ್. ಕೆ. ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಸಚಿನ್ ಎಂ.ಸ್ವಾಗತಿಸಿದರು. ಮುಖ್ಯ ಶಿಕ್ಷಕಿ.ಸಿ. ಮರೀನಾ ವರದಿ ವಾಚಿಸಿದರು. ಕಾರ್ಯಕ್ರಮಕ್ಕೂ ಮುನ್ನ ನಡೆದ ಧ್ವಜಾರೋಹಣವನ್ನು ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಅರುಣ್ ಎಂ.ವಿಟ್ಲ ನೆರವೇರಿಸಿದರು.


