ವಿಟ್ಲ: ಇತ್ತೀಚೆಗೆ ಮಲೇಶಿಯಾದಲ್ಲಿ ನಡೆದ ನೆಟ್ ಬಾಲ್ ಸ್ಪರ್ಧೆಯಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಜಯಗಳಿಸಿದ್ದು, ತಂಡದ ಉಪನಾಯಕನಾಗಿದ್ದ ವಿಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ನಿತಿನ್ ಗೆ ವಿಠಲ ಪದವಿ ಪೂರ್ವ ಕಾಲೇಜು ಹಾಗೂ ವಿಠಲ ಪ್ರೌಢ ಶಾಲಾ ವತಿಯಿಂದ ಸನ್ಮಾನ ಕಾರ್ಯಕ್ರಮ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿಠಲ ವಿದ್ಯಾ ಸಂಘ ಕೋಶಾಧಿಕಾರಿ ನಿತ್ಯಾನಂದ ನಾಯಕ್, ಸದಸ್ಯ ಪದ್ಮಯ್ಯ ಗೌಡ, ಪ್ರಾಂಶುಪಾಲ, ಉಪನ್ಯಾಸಕರು ಮತ್ತಿತರರು ಭಾಗವಹಿಸಿದ್ದರು.


