ಹುಬ್ಬಳ್ಳಿ: ಬಿಜೆಪಿಯ ಪರಿವರ್ತನಾ ಯಾತ್ರೆ ನಗರದ ನೆಹರೂ ಮೈದಾನದಲ್ಲಿ ಇಂದು ಸಂಜೆ 5ಕ್ಕೆ ಬೃಹತ್ ಸಭೆ ನಡೆಯಲಿದೆ.
ಸಭಾ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮುಖ್ಯ ಭಾಷಣ ಮಾಡಲಿರುವರು.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಸ್ಟೇಶನ್ ರಸ್ತೆಯಿಂದ ಮೈದಾನದ ಬಳಿ ಹಾಯ್ದು ಕಿತ್ತೂರು ಚನ್ನಮ್ಮ ವೃತ್ತ ಸಂಪರ್ಕಿಸುವ ರಸ್ತೆಯನ್ನು ಬಂದ್ ಮಾಡಿದ್ದು, ಪರ್ಯಾಯ ಮಾರ್ಗದ ಮೂಲಕ ವಾಹನಗಳು ತೆರಳುತ್ತಿವೆ.

