ಹಾವೇರಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಾವರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸವಣೂರು ತಾಲೂಕಿನ ಯಲವಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮೃತರನ್ನು ರಮೇಶ ತೋಟದ (29) ಮೆಹಬೂಬಸಾಬ ಮೇವುಂಡಿ(35) ಗುರುತಿಸಲಾಗಿದ್ದು, ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಗಾಯಾಳುವನ್ನು ಸ್ಥಳೀಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಸವಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

