ಬಂಟ್ವಾಳ: ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿನಲ್ಲಿ ಗುರುವಾರ ನಡೆದ ಗ್ರಾಮಸಭೆಯಲ್ಲಿ ಗ್ರಾಮಕರಣಿಕ ವಿನೋದ್ ಕುಮಾರ್ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಉಪಾಧ್ಯಕ್ಷೆ ಪುಷ್ಪಲತಾ, ತಾಲ್ಲೂಕು ಪಂಚಾಯಿತಿ ಸದಸ್ಯೆ ಮಂಜುಳಾ ಸದಾನಂದ, ನೋಡೆಲ್ ಅಧಿಕಾರಿ ದಯಾವತಿ ಮತ್ತಿತರರು ಇದ್ದಾರೆ.
