KAR_3406

ಬಂಟ್ವಾಳ: ಸರಕಾರ ಹಿಂದುಳಿದ ವರ್ಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ನಾವು ಅವುಗಳನ್ನು ಉಪಯೋಗಿಸಿಕೊಂಡು ಮತ್ತಷ್ಟು ಉನ್ನತ ಸ್ಥಾನಗಳನ್ನು ಪಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಸಲಹೆ ನೀಡಿದ್ದಾರೆ.

ಇಲ್ಲಿನ ಆಶ್ರಮ ಶಾಲಾ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಬಂಟ್ವಾಳ ತಾ.ಪಂ.ವತಿಯಿಂದ ಆಯೋಜಿಸಿದ್ದ ತಾಲೂಕು ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿರುವ ಅಂತಿಮ ವರ್ಷದ ಸ್ನಾತಕೋತ್ತರ ಮತ್ತು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಐಎಎಸ್ಐ,ಪಿಎಸ್ , ಕೆಎಎಸ್ , ಬ್ಯಾಂಕಿಂಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷಗಳನ್ನು ಎದುರಿಸುವ ಮಾಹಿತಿ ಕಾರ್ಯಗಾರವನ್ನು ಅವರು ಉದ್ಘಾಟಿಸಿದರು.

ಈ ವೇಳೆ ಸಂಪನ್ಮೂಲ ವ್ಯಕ್ತಿ ಸರ್ವಜ್ಞ, ಮಂಗಳೂರು ಐಎಎಸ್ ಅಕಾಡಮಿ  ವ್ಯವಸ್ಥಾಪಕ ನಿರ್ದೇಶಕ ಸುರೇಶ್.ಎಂ.ಎಸ್ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾ.ಪಂ.ಸ್ಥಾ ಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ ಬಂಗೇರಾ , ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮೋಹನ್ ಕುಮಾರ್, ಮೇಲ್ವಿಚಾರಕಿ ಭವಾನಿ ಕಿರಿಯ ಮೇಲ್ವಿಚಾರಕಿ ಸೀತಾ, ಅಂಬುಜಾಕ್ಷಿ, ನಾರಾಯಣ ನಾಯ್ಕ ಉಪಸ್ಥಿತರಿದ್ದರು. ಹಿಂದುಳಿದ ವರ್ಗ ಗಳ ವಿಸ್ತರಣಾಧಿಕಾರಿ ಎಂ.ಜಯಣ್ಣ ಸ್ವಾಗತಿಸಿ, ವಂದಿಸಿದರು.

By suddi9

Leave a Reply

Your email address will not be published. Required fields are marked *