ಬಂಟ್ವಳ: ಇಲ್ಲಿನ ಬಿ.ಸಿ.ರೋಡ್ ನ ಗಾಣದಪಡ್ಪುನಲ್ಲಿರುವ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಆಯೋಜಿಸಿದ್ದ ‘ಸುವರ್ಣ ಮಹೋತ್ಸವ’ ಕಾರ್ಯಕ್ರಮಕ್ಕೆ ಮಾಜಿ ಕೇಂದ್ರ ವಿತ್ತ ಸಚಿವ ಬಿ.ಜನಾರ್ದ ಪೂಜಾರಿ ರವಿವಾರ ಚಾಲನೆ ನೀಡಿದರು.
ಈ ವೇಳೆ ಬಿ.ತಮ್ಮಯ್ಯ ಅವರ ಸಂಪಾದಕತ್ವದಲ್ಲಿರುವ “ಸುವರ್ಣ ಕೇದಗ” ಸ್ಮರಣೆ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಅಲ್ಲದೆ, ಸಂಘದ ಹಾಲಿ ಅಧ್ಯಕ್ಷರ ಸಹಿತ ಐವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕನ್ಯಾಡಿ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಬಿಲ್ಲವ ಸಮಾಜ ಸೇವಾ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಸಂಘದ ಮಾಜಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್, ಪ್ರ.ಕಾರ್ಯದರ್ಶಿ ಬೇಬಿ ಕುಂದರ್, ಕೋಶಾಧಿಕಾರಿ ರಮೇಶ್, ಮಹಿಳಾ ಘಟಕದ ಅಧ್ಯಕ್ಷೆ ಭಾರತಿ ಬೇವಿ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.


