ಕೊಪ್ಪಳ: ಸಂವಿಧಾನವನ್ನು ಬದಲಾಯಿಸಲು ನಾವು ಅಧಿಕಾರಕ್ಕೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಕುಕನೂರ ಪಟ್ಟಣದಲ್ಲಿ ಯುವಜನ ಮೇಳ ಕಾರ್ಯಕ್ರಮವನ್ನು ರವಿವಾರ ಉದ್ಘಾಟಿಸಿ ಮಾತನಾಡಿದ ಅವರು, ಕಾಲಕ್ಕೆ ತಕ್ಕಂತೆ ಸಂವಿಧಾನದ ಅಂಶಗಳಲ್ಲಿ ಬದಲಾವಣೆ ಅಗತ್ಯವಾಗಿದ್ದು, ಸಂವಿಧಾನ ಬದಲಾವಣೆಗೆ ನಾವು ಬಂದಿದ್ದು, ನಾವೇ ಅದನ್ನು ಬದಲಾಯಿಸುತ್ತೇವೆ ಎಂದರು.
ಜಾತ್ಯತೀತರು ಎಂದು ಹೇಳಿಕೊಳ್ಳುವ ಇಂಥವರ ರಕ್ತದ ಬಗ್ಗೆ ನನಗೆ ಅನುಮಾನ ಇದೆ ಎಂದ ಅವರು, ಅಪ್ಪ ಅಮ್ಮನ ಗುರುತಿಲ್ಲದವರು ಮತ್ತು ರಕ್ತದ ಗುರುತಿಲ್ಲದವರು ಜಾತ್ಯತೀತರು ಎಂದು ಲೇವಡಿ ಮಾಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ, ವಿಧಾನ ಪರಿಷತ್ ಮಾಜಿ ಸದಸ್ಯ ಹಾಲಪ್ಪ ಆಚಾರ ಇತರರು ಪಾಲ್ಗೊಂಡಿದ್ದರು.

