ಬಂಟ್ವಾಳ:ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೀಶ್ವರ ದೇವಸ್ಥಾನದಲ್ಲಿ ಜ. 26ರ ಗಣರಾಜ್ಯೋತ್ಸವ ದಿನದಂದು ನನ್ನ ಆತ್ಮ ಚರಿತ್ರೆ ಪುಸ್ತಕ ಬಿಡುಗಡೆ ಮಾಡುವುದಾಗಿ ಕೇಂದ್ರ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ಘೋಷಿಸಿದರು.ತಾಲ್ಲೂಕಿನ ಬಿಲ್ಲವ ಸಂಘ ಸಮಾಜ ಸೇವಾ ಸಂಘದ ವತಿಯಿಂದ ಬಿ.ಸಿ.ರೋಡ್ ಗಾಣದಪಡ್ಪು ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ‘ಸುವರ್ಣ ಮಹೋತ್ಸವ’ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

24btl-Billava
ಸಂಘದ ಉಪಾಧ್ಯಕ್ಷ ರಾಘವ ಅಮೀನ್ ಮರಕಡಬೈಲು, ವಕೀಲ ಸತೀಶ್ ಕುಮಾರ್ ಬಿ., ಜತೆ ಕಾರ್ಯದರ್ಶಿ ಶಂಕರ್ ಕಾಯೆರ್‍ಮಾರ್, ಮಹಿಳಾ ಸಮಿತಿ ಅಧ್ಯಕ್ಷೆ ಭಾರತಿ ಬಿ. ಕುಂದರ್ ಉಪಸ್ಥಿತರಿದ್ದರು.

ಸಂಘದ ಮಾಜಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ಪ್ರಾಸ್ತಾವಿಕ ಮಾತನಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ಸ್ವಾಗತಿಸಿದರು. ಕೋಶಾಧಿಕಾರಿ ರಮೇಶ್ ಎಂ. ತುಂಬೆ ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *