ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಮ್ಮತದ ನಿರ್ಣಯದಿಂದ ಮಹದಾಯಿ ವಿವಾದ ಇತ್ಯರ್ಥಪಡಿಸಬೇಕೆಂದು ಆಗ್ರಹಿಸಿ ಡಿ. 27ರಂದು ಉತ್ತರ ಕರ್ನಾಟಕ ಬಂದ್ ಗೆ ಕಳಸಾ ಬಂಡೂರಿ ಹೋರಾಟ ಸಮಿತಿ ಕರೆ ನೀಡಿದೆ.
ಮಹದಾಯಿ ವಿಚಾರದ ಬಗ್ಗೆ ಕೇಂದ್ರದ ಗಮನಕ್ಕೆ ತರಲು ಕ್ರಮ ಕೈಗೊಳ್ಳುತ್ತೇನೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಇದೀಗಾ ಹಿಂಜರಿಯುವ ಮೂಲಕ ಕೊಟ್ಟ ಮಾತಿಗೆ ತಪ್ಪಿದ್ದಾರೆ. ಹೀಗಾಗಿ ಡಿ. 27 ರಂದು ಬಂದ್ ಕರೆ ನೀಡಲಾಗಿದ್ದು, ಈ ಬಂದ್ಗೆ ಕಳಸಾ ಬಂಡೂರಿ ಮಹದಾಯಿ ಹೋರಾಟ ಸಮಿತಿ ಮತ್ತು ವಿವಿಧ ಕನ್ನಡಪರ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿದೆ ಎಂದು ಕಳಸಾ ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ರಾಜಣ್ಣ ಕೊರವಿ ಮಾಹಿತಿ ನಿಡಿದ್ದಾರೆ.

