ಬಂಟ್ವಾಳ: ಕಳೆದ ಕೆಲವು ತಿಂಗಳ ಹಿಂದೆ ನಡೆದ ಕರೋಡಿಪಾಡಿ ಗ್ರಾ.ಪಂ. ಉಪಾಧ್ಯಕ್ಷ ಜಲೀಲ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನಿಗೆ ದುಷ್ಕರ್ಮಿಗಳು ಚೂರಿ ಇರಿದ ಘಟನೆ ತಾಲೂಕಿನ ಕಲ್ಲಡ್ಕದಲ್ಲಿ ಮಂಗಳವಾರ ಸಂಜೆ ವೇಳೆ ನಡೆದಿದೆ.
ಇಲ್ಲಿನ ವೀರಕಂಭ ನಿವಾಸಿ ಕೇಶವ ಇರಿತಕ್ಕೊಳಗಾದವ ಎಂದು ಗುರುತಿಸಲಾಗಿದೆ.ಪಂಚವಟಿ ಕಟ್ಟಡ ಬಳಿ ನಿಂತಿದ್ದ ಕೇಶವನಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿದ್ದು, ಬಳಿಕ ಕೇಶವನನ್ನು ಸ್ಥಳೀಯ ಆಸ್ಪತ್ರೆ ಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ. ಜಲೀಲ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಕೇಶವ ಕೆಲ ದಿನಗಳ ಹಿಂದೆ ಜಾಮೀನು ಪಡೆದು ಹೊರ ಬಂದಿದ್ದು, ಹಳೆ ದ್ವೇಷವೇ ಇರಿತಕ್ಕೆ ಕಾರಣವೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಖಾಸಗಿ ಬಸ್ ಗೆ ಕಲ್ಲು ತೂರಾಟ:
ಈ ಘಟನೆ ನಡೆದ ಬಳಿಕ ಕೆಲ ಗಂಟೆಗಳ ಕಾಲ ಉದ್ವಿಗ್ನ ಕೊಂಡ ವೇಳೆ ಖಾಸಗಿ ಬಸ್ ಗೆ ಕಿಡಿಕೇಡಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದೆ.
ಅಂಗಡಿ ಮುಂಗಟ್ಟು ಬಂದ್:
ಈ ಘಟನೆಯಿಂದ ಎಚ್ಚತ್ತ ಸ್ಥಳೀಯ ಅಂಗಡಿ ಮಾಲಕರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿಗಳನ್ನು ಬಂದ್ ಮಾಡಿದ್ದಾರೆ. ಇನ್ನೂ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ತಾಲೂಕಿನ ನಾನಾ ಭಾಗದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಠಿಕಾಣಿ ಹೂಡಿದ್ದಾರೆ.

