ಬಂಟ್ವಾಳ: ಲಾರಿಯೊಂದು ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ಇಲ್ಲಿನ ಬಿ.ಸಿ.ರೋಡ್ ಮುಖ್ಯ ವೃತ್ತದ ಬಳಿ ಗುರುವಾರ ನಡೆದಿದೆ.
ಈ ಕಾರು ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ಬಿ.ಸಿ.ರೋಡು ಮುಖ್ಯ ವೃತ್ತದ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದ್ದು, ಪರಿಣಾಮ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗೊಂಡು ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಘಟನೆಯಿಂದ ಕೆಲ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

