ಮೈಸೂರು: ಸಂವಿಧಾನದ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿ ನರೇಂದ್ರ ಮೋದಿ ಸರ್ಕಾರಕ್ಕೆ ಅವಮಾನ ಮಾಡಿರುವ ಅನಂತಕುಮಾರ್ ಹೆಗಡೆ ಹಾಗೂ ಗೋ. ಮಧುಸೂದನ್ ಮತಾಂಧರು, ಅವಿವೇಕಿಗಳು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ತಮ್ಮ ಪಕ್ಷದ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿದ ಈ ಇಬ್ಬರಿಗೆ ಇಬ್ಬರಿಗೂ ಪಕ್ಷದ ವರಿಷ್ಠರು ಕ್ರಮ ಕೈಗೊಂಡು ಎಚ್ಚರಿಕೆ ನೀಡಬೇಕು ಎಂದರು.
ನರೇಂದ್ರ ಮೋದಿ ಅವರು ಸಂವಿಧಾನವೇ ಶ್ರೇಷ್ಠ ಗ್ರಂಥ ಎಂದು ಅವರು ಒಪ್ಪಿಕೊಂಡಿದ್ದು, ಆದರೆ ಐದು ಬಾರೀ ಸಂಸದರಾಗಿ ಆಯ್ಕೆಯಾಗಿರುವ ಹೆಗಡೆಗೆ ಸಂವಿಧಾನದ ಬಗ್ಗೆ ತಿಳಿಯದಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.
ಇನ್ನೂ ಬುದ್ಧಿ ವಿಕಾಸವಾಗಿರದ ವಿಧಾನ ಪರಿಷತ್ ಸದಸ್ಯನಾಗಿದ್ದ ಗೋ.ಮಧುಸೂದನ್‌ಗೆ ಸಂವಿಧಾನದ ಬಗ್ಗೆ ಅನಾವಶ್ಯಕವಾಗಿ ಹೇಳಿಕೆ ನೀಡಿ ವಿವಾದಾತ್ಮಕಕ್ಕೆ ಸಿಲಿಕಿದರು ಅದನ್ನು ಸಮರ್ಥಿಸಿಕೊಳ್ಳುವ ಆತನಿಗೆ ನಾಚಿಕೆಯಾಗಬೇಕು ಎಂದು ಅವರು ಕಿಡಿಕಾರಿದರು.

