ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಂಯುಕ್ತಾಶ್ರದಲ್ಲಿ ಡಿ.31ರಂದು ನಗರದ ನೆಹರು ಮೈದಾನದಲ್ಲಿ ‘ಪತ್ರಕರ್ತರ ಕ್ರಿಡಾಕೂಟ’ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 830ಕ್ಕೆ ನಡೆಯುವ ಕ್ರೀಡಾಕೂಟ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಜಗನ್ನಾಥ ಸೆಟ್ಟಿ ಬಾಳಾ ವಹಿಸಲಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಹಾಗೂ ಮಂಗಳೂರು ನಗರ ಪಾಲಿಕೆ ಆಯುಕ್ತ ನಝೀರ್ ಮುಖ್ಯ ಅಥಿತಿಗಳಾಗಿ ಭಾಗವಹಿಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

