RREDDY11BG2

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಹೊಸ ವರ್ಷಾಚರಣೆ ಸಂಭ್ರಮಿಸಲು ಅಧಿಕ ಸಂಖ್ಯೆಯಲ್ಲಿ ಸೇರಿದ್ದ ಯುವಕ-ಯುವತಿಯರಲ್ಲಿ 15 ಕ್ಕೂ ಹೆಚ್ಚು ಮಂದಿಗೆ ವಾಹನ ಸಿಗದಿದ್ದರಿಂದ ಸ್ಥಳೀಯ ಪೊಲೀಸರು ಅವರನ್ನು ಮನೆಗೆ ಬಿಟ್ಟು ಬಂದಿದ್ದಾರೆ ಎಂದು ತಿಳಿಸಿದರು.

ಸಚಿವ ಅನಂತ್‍ ಕುಮಾರ್ ಹೆಗಡೆ ಹೇಳಿಕೆ ನೀಡಿದ್ದರ ಬಗ್ಗೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಿಜೆಪಿಯವರು ಹಿಂದು ಧರ್ಮದ ವಿಷಯದಲ್ಲಿ ರಾಜಕಾರಣಮಾಡುತ್ತಿದ್ದು, ನಾವೂ ಕೂಡ ಹಿಂದುಗಳೇ, ಆದರೆ ಅವರ ಹಾಗೇ ಮಾಡಲ್ಲ ಎಂದು ತೀಕ್ಷ್ಣವಾಗಿ ನುಡಿದರು.

22 ಮಂದಿ ಹಿಂದುಗಳ ಹತ್ಯೆಯಾಗಿದೆ ಎಂದು ಬಿಜೆಪಿಯವರು ಆರೋಪಿಸುತ್ತಿದ್ದಾರೆ, ಇದರಲ್ಲಿ 8 ಮಂದಿ ವೈಯಕ್ತಿಕ ಕಾರಣಗಳಿಗೆ ಕೊಲೆಯಾಗಿದ್ದಾರೆ ಎಂದವರು, ಪರೇಶ್ ಮೇಸ್ತಾ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದ್ದು, ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದರು.

By Suddi9

Leave a Reply

Your email address will not be published. Required fields are marked *