vhp-story_647_032317051459

ಮಂಗಳೂರು: ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ದುರ್ಗಾವಾಹಿನಿ ವತಿಯಿಂದ ಲವ್ ಜಿಹಾದ್ ವಿರುದ್ಧ  ಜ.3ರಿಂದ ‘ಜನಜಾಗೃತಿ ಅಭಿಯಾನ’ ಆಯೋಜಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್ ತಿಳಿಸಿದ್ದಾರೆ.

ಮಂಗಳವಾರ ವಿಹಿಂಪ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ಕ್ಕೆ ನಗರದ ಪಿವಿಎಸ್ ನ ಲಕ್ಷ್ಮಿ ನಾರಾಯಣ ದೇವಸ್ಥಾನದಿಂದ ಈ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಬಳಿಕ ಎಲ್ಲಾ ಮನೆ ಮನೆಗಳಿಗೆ ತೆರಲಿ ಲವ್ ಜಿಹಾದ್ ವಿರುದ್ಧದ ಬಗ್ಗೆ  ಕರ ಪತ್ರ ಹಂಚಲಾಗುವುದು. ಅಲ್ಲದೆ, ಪ್ರತೀ ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು ಎಂದರು.

ಲವ್ ಜಿಹಾದ್ ಗೆ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿ ಭಾಗದ ಹಿಂದೂ ಯುವತಿಯರು ಬಲಿಯಾಗುತ್ತಿದ್ದು, ಸಮಾಜದ ಸ್ವಸ್ಥ್ಯ ಹಾಳಾಗುತ್ತಿದೆ. ಇದಕ್ಕಾಗಿ ಪೊಲೀಸ್ ಇಲಾಖೆ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಜರಂಗದಳದ ದ.ಕ. ಜಿಲ್ಲಾ ಸಂಚಾಲಕ ಶರಣ್ ಪಂಪ್ ವೆಲ್, ಕುತ್ತಾರ್, ಭುಜಂಗ ಕುಲಾಲ್ ಮತ್ತಿತರರಿದ್ದರು.

 

 

 

 

By suddi9

Leave a Reply

Your email address will not be published. Required fields are marked *