ಮಂಗಳೂರು: ದೀಪಕ್ ರಾವ್ ಹತ್ಯೆ ಸೇರಿದಂತೆ ರಾಜ್ಯದಲ್ಲಿ ನಡೆದಿರುವ ಹಿಂದು ಕಾರ್ಯಕರ್ತರ ಹತ್ಯೆ ಪ್ರಕರಣಗಳ ತನಿಖೆಯನ್ನು ಎನ್ಐಎಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಗ್ರಹಿಸಿದ್ದಾರೆ.
ಅಮಾಯಕ ಹಿಂದೂ ಕಾರ್ಯಕರ್ತರ ಹತ್ಯೆಗಳ ಪ್ರಕರಣಗಳನ್ನು ಎನ್ಐಎಗೆ ವಹಿಸದಿದ್ದರೆ ರಾಜ್ಯವ್ಯಾಪಿ ಹೋರಾಟ ನಡೆಸಲಾಗುವುದು ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.
ದ.ಕ.ಜಿಲ್ಲೆಯಲ್ಲಿ ರಮಾನಾಥ ರೈ ಅವರು ತನ್ನ ರಾಜಕೀಯ ಲಾಭಗೋಸ್ಕರ ಚುನಾವಣೆಯಲ್ಲಿ ಮುಸ್ಲಿಮರ ಒಲೈಕೆಗೆ ಮುಂದಾಗಿದ್ದು, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ಅವರು, ಮೃತ ದೀಪಕ್ ಕುಟುಂಬಕ್ಕೆ ರಾಜ್ಯ ಸರಕಾರ ಈ ಕೂಡಲೇ 25 ಲಕ್ಷ ರೂ. ಪರಿಹಾರ ನೀಡಬೇಕೆಂದರು ಕೋರಿದರು.

