ಸಿದ್ಧಕಟ್ಟೆ: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಕುಕ್ಕಿಪಾಡಿ ಗ್ರಾಮ ಪಂಚಾಯತ್ ಜ.7ರಂದು *ಆಳ್ವಾಸ್ ರೀಚ್*-2018 ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆಯ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಯೋಜಿಸಲಾಗಿದೆ.
ಉದ್ಘಾಟನಾ ಕಾರ್ಯಕ್ರಮ:
ಬೆಳಗ್ಗೆ ಗಂಟೆ 9.30ಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್‍ಮೆಂಟ್ ಟ್ರಸ್ಟಿ ವಿವೇಕ್ ಆಳ್ವ ಅವರು ಅಧ್ಯಕ್ಷತೆ ವಹಿಸಿಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷ ದಿನೇಶ ಸುಂದರ ಶಾಂತಿ, ಸಿದ್ಧಕಟ್ಟೆಯ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಗೋಪಾಲ ಬಂಗೇರ, ಕುಕ್ಕಿಪಾಡಿ ಪಂಚಾಯತ್ ಅಭಿವೃದ್ಧಿ ಅಕಾರಿ ತುಳಸಿ ಪಿ.ಶೆಟ್ಟಿ, ಮುಂಬೈಯ ಮಾನವ ಸದನ್ ವಿಕಾಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಕಾರಿ ಸುನೀತ ಪೂಜಾರಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.
ವಿಚಾರಗೋಷ್ಠಿ:
*ಮಾನಸಿಕ ಸ್ವಾಸ್ಥ್ಯ ಏಕೆ ಅಗತ್ಯ ?* ಎಂಬ ಕುರಿತ ವಿಚಾರಗೋಷ್ಠಿಯಲ್ಲಿ ಮುಂಬೈಯ ಮಾನವ ಸದನ್ ವಿಕಾಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಕಾರಿ, ಸಂಪನ್ಮೂಲ ವ್ಯಕ್ತಿಯಾದ ಸುನೀತ ಪೂಜಾರಿ ಅವರು ಉಪನ್ಯಾಸ ನೀಡಲಿದ್ದಾರೆ. *ಚಟಗಳು ಮತ್ತು ಮಾನಸಿಕ ಸ್ವಾಸ್ಥ್ಯ* ಎಂಬ ಕುರಿತ ವಿಚಾರಗೋಷ್ಠಿಯಲ್ಲಿ ಉಡುಪಿ ಡಾ.ಎ.ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋತಜ್ಞ, ಸಂಪನ್ಮೂಲ ವ್ಯಕ್ತಿಯಾದ ಡಾ.ಪಿ.ವಿ.ಭಂಡಾರಿ ಅವರು ಉಪನ್ಯಾಸ ನೀಡಲಿದ್ದಾರೆ.
ಸಮಾರೋಪ ಕಾರ್ಯಕ್ರಮ:
ಸಂಜೆ ಗಂಟೆ 4ಕ್ಕೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತಾಕಾರಿ ಅಭಿನಂದನ್ ಶೆಟ್ಟಿ ಗೌರವ ಉಪಸ್ಥಿತರಿರುವರು.ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ, ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಪ್ರಗತಿಪರ ಕೃಷಿಕ ವಾಸು ಶೆಟ್ಟಿ ಕುತ್ಲೋಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.
