ಚಿಕ್ಕಮಗಳೂರು: ಮನೆಗೆ ನುಗ್ಗಿ ದಲಿತ ಮಹಿಳೆಯೋರ್ವಳ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ನಡೆದಿದೆ.
ಬಿಜಿಪಿ ಕಾರ್ಯಕರ್ತ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ನರೇಂದ್ರ ಹೆಗ್ಗಡೆ 2017ರ ಡಿ. 31 ರ ತಡರಾತ್ರಿ ನಾನು ಒಬ್ಬಳೇ ಇರುವುದನ್ನು ತಿಳಿದುಕೊಂಡು ಮನೆಗೆ ನುಗ್ಗಿ ಕುಡಿದ ಮತ್ತಿನಲ್ಲಿ ಏಕಾಏಕಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಮಂಗಳವಾರ ಶೃಂಗೇರಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಈ ವಿಚಾರ ತಿಳಿದ ನರೇಂದ್ರ ಹೆಗ್ಗಡೆ ನಾಪತ್ತೆಯಾಗಿದ್ದು, ಪೊಲೀಸರು ಆತನಿಗಾಗಿ ಶೋಧ ಮುಂದುವರೆಸಿದ್ದಾರೆ.

