ಬಂಟ್ವಾಳ: ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದಾ ಕರ್ತವ್ಯನಿವೃತ್ತಾದ ಹಿನ್ನೆಲೆಯಲ್ಲಿ ಅವರನ್ನು ಬೀಳ್ಕೊಡುವ ಕಾರ್ಯಕ್ರಮ ಇತ್ತೀಚೆಗೆ ತಾ.ಪಂ. ಎಸ್ ಜೆಎಸ್ ವೈ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ, ತಹಶೀಲ್ದಾರ್ ಪುರಂದರ ಹೆಗ್ಡೆ, ಜಿಪಂ ಸಹಾಯಕ ಯೋಜನಾಧಿಕಾರಿ ಸಚಿನ್ ಕುಮಾರ್, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಗೋಕುಲ್ ದಾಸ್ ಭಕ್ತ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಮಂಜು ವಿಟ್ಲ ಕಾರ್ಯಕ್ರಮವನ್ನು ನಿರೂಪಿಸಿದರು.

