464999

ಚಿಕ್ಕಮಗಳೂರು: ಮೂಡಿಗೆರೆಯ ವಿದ್ಯಾರ್ಥಿನಿ ಧನ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೋರ್ವನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಜೇಕಾರ್ ನಿವಾಸಿ ಸಂತೋಷ್ (20) ಬಂಧಿತ ಆರೋಪಿ ಎಂದು ಗುರುತಿಸಲಾಗಿದ್ದು, ಈತನನ್ನು ಪೊಲೀಸರು ಬೆಂಗಳೂರಿನಲ್ಲಿ  ಬಂಧಿಸಿದ್ದಾರೆ.

ಮೂಡಿಗೆರೆ ಪಟ್ಟಣದ ಛತ್ರ ಮೈದಾನದ ನಿವಾಸಿಯಾದ ಯಾದವ ಸುವರ್ಣ ಅವರ ಪುತ್ರಿ ಧನ್ಯಶ್ರೀ (20) ತಮ್ಮ ಮನೆಯಲ್ಲಿ ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

By Suddi9

Leave a Reply

Your email address will not be published. Required fields are marked *