ಬಂಟ್ವಾಳ:ತಾಲ್ಲೂಕಿನ ಲಯನ್ಸ್ ಕ್ಲಬ್ ವತಿಯಿಂದ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಇದೇ 16ರಂದು ಸಂಜೆ 7 ಗಂಟೆಗೆ ಕ್ಲಬ್ಬಿನ ಮಾಜಿ ಅಧ್ಯಕ್ಷ ದಿವಂಗತ ಎಂ.ದೇವಪ್ಪ ಶೆಟ್ಟಿ ಮಾವಂತೂರು ಇವರ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ಬಿನ ಜಿಲ್ಲಾ ಗವರ್ನರ್ ಮತ್ತಿತರ ಪ್ರತಿನಿಧಿಗಳು ಸಹಿತ ವಿವಿಧ ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸುವರು .
