ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮಂಧಾರ್ ಸೆಕ್ಟರ್ ಬಳಿ ಕಳೆದ 5 ದಿನಗಳಿಂದ ನಡೆಯುತ್ತಿರುವ ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿ ರವಿವಾರವೂ ಮುಂದುವರಿದಿದ್ದು, ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ಚಂದನ್ ಕುಮಾರ್ ರಾಯ್ (25) ಹುತಾತ್ಮ ಯೋಧ ದು ಗುರುತಿಸಲಾಗಿದೆ.
ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡು, ಮಾರ್ಟರ್ ಶೆಲ್’ಗಳ ದಾಳಿ ನಡೆಸಲಾಗಿದೆ. ದಾಳಿಗೆ ದಿಟ್ಟ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಯೋಧ ಚಂದನ್ ರಾಯ್ ಅವರು ತೀವ್ರವಾಗಿ ಗಾಯಗೊಂಡು ನಂತರ ಆಸ್ಪತ್ರೆಯಲ್ಲಿ ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ.

