BNG-SUICIDE-1-1

ಬೆಂಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ನರ್ಸ್ ಓರ್ವಳು ಆಸ್ಪತ್ರೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ನಾಗರಭಾವಿಯಲ್ಲಿನ ಶ್ರೀದೇವಿ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ.

ನಿಷ್ಕಲಾ(25) ಆತ್ಮಹತ್ಯೆ ಮಾಡಿಕೊಂಡ ನರ್ಸ್ ಎಂದು ಗುರುತಿಸಲಾಗಿದೆ.

ಶ್ರೀದೇವಿ ಆಸ್ಪತ್ರೆಯಲ್ಲಿ ಕೆಲಸಕ್ಕಿದ್ದ ಗಂಗಾಧರ್ ಎಂಬಾತನನ್ನು ಅದೇ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದ ನಿಷ್ಕಲಾ ಪ್ರೀತಿಸುತ್ತಿದ್ದಳು. ಈ ಪ್ರೀತಿ ಮದುವೆ ಹಂತಕ್ಕೆ ತಲುಪಿತ್ತಿದ್ದಂತೆ ಗಂಗಾಧರ್ ಜಾತಿಯ ನೆಪವೊಡ್ಡಿ ಮದುವೆಗೆ ನಿರಾಕರಿಸಿದ್ದ. ಇದರಿಂದ ತೀವ್ರ  ಮನನೊಂದಿದ್ದ ನಿಷ್ಕಲಾ ಇಂದು ಕೆಲಸಕ್ಕೆ ತೆರಳಿ ಆಸ್ಪತ್ರೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By Suddi9

Leave a Reply

Your email address will not be published. Required fields are marked *