ಕಲಬುರಗಿ: ಅಪರಿಚಿತ ಯುವಕನೋರ್ವನ ಶವಪತ್ತೆಯಾಗಿರುವ ಘಟನೆ ಇಲ್ಲಿನ ಜೇವರ್ಗಿ ತಾಲೂಕಿನ ಯಡ್ರಾಮಿ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಪಟ್ಟಣದ ಯಲ್ಲಮ್ಮ ದೇವಸ್ಥಾನದ ಸಮೀಪ ಪೋದೆಯಲ್ಲಿ 25 ರಿಂದ 28 ವಯಸ್ಸಿನ ಯುವಕ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಬೇರೆ ಕಡೆ ಕೊಲೆ ಮಾಡಿ ಇಲ್ಲಿ ತಂದು ಹಾಕಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಯಡ್ರಾಮಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

