ಹುಬ್ಬಳ್ಳಿ: ಅಡುಗೆ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಹಾಗೂ ಟಿಪ್ಪರ್ ನಡುವೆ ಮಾಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸುಮಾರು 180ಕ್ಕೂ ಅಧಿಕ ಸಿಲಿಂಡರ್ ಸ್ಫೋಟಗೊಂಡ ಘಟನೆ ನಗರದ ಭಂಡಿವಾಡ ಗ್ರಾಮದ ಬಳಿ ನಡೆದಿದೆ.
ಈ ಅಪಘಾತದಿಂದ ಲಾರಿಯಲ್ಲಿದ್ದ 300 ಕ್ಕೂ ಹೆಚ್ಚು ಸಿಲಿಂಡರ್ ಪೈಕಿ ಸುಮಾರು 180 ಕ್ಕೂ ಹೆಚ್ಚು ಸಿಲಿಂಡರ್ ಸ್ಫೋಟಗೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಸಿಲಿಂಡರ್ ನಿಂದ ಹೊತ್ತಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಟಿಪ್ಪರ್ ಚಾಲಕರು ಹಾಗೂ ಕ್ಲೀನರ್ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಇದರಿಂದ ಸಿಲಿಂಡರ್ ಗಳು ಚೆಲ್ಲಾಪಿಲ್ಲಿಯಾಗಿ ಸ್ಫೋಟಗೊಳ್ಳುತ್ತಿದಂತೆ ಸ್ಥಳದಲ್ಲಿ ಆತಂತಕದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೆ, ಹುಬ್ಬಳ್ಳಿ- ಗದಗ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

