ಬೆಂಗಳೂರು: 25 ರಂದು ‘ಕರ್ನಾಟಕ ಬಂದ್’ಗೆ ಕರೆ ನೀಡಿರುವ ಹಿನ್ನೆಲೆ ಖಾಸಗಿ ಶಾಲೆಗಳಿಗೆ ರಜೆ ನೀಡಲು ಕೆಲವು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ನಿರ್ಧರಿಸಿವೆ.
ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ನೀಡಲು ನಿರ್ಧರಿಸಿರುವುದಾಗಿ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕೆಎಎಂಎಸ್) ತಿಳಿಸಿದೆ.
ಪರಿಸ್ಥಿತಿ ನೋಡಿ ನಿರ್ಧಾರ ತೆಗೆದುಕೊಳ್ಳಲು ಶಾಲೆಗಳಿಗೆ ಸೂಚಿಸಲಾಗಿದೆ’ ಎಂದು ಸಿಬಿಎಸ್ಇ ಶಾಲೆಗಳ ಆಡಳಿತ ಮಂಡಳಿಗಳ ಸಂಘದ ಮನ್ಸೂರ್ ಖಾನ್ ತಿಳಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ವಿ.ಶಂಕರ್, ‘ಬೆಂಗಳೂರು ನಗರ ಜಿಲ್ಲೆಯಲ್ಲಿ ರಜೆ ನೀಡುವ ಸಂಬಂಧ ನಿರ್ಧಾರ ತೆಗೆದುಕೊಂಡಿಲ್ಲ’ ಎಂದಿದ್ದಾರೆ.

