ಮಂಗಳೂರು: ಹಿರಿಯ ಸಾಮಾಜಿಕ, ಧಾರ್ಮಿಕ ಮುಂದಾಳು ಹಾಜಿ ಹಮೀದ್ ಕಂದಕ್ ಬುಧವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
68 ವರ್ಷದ ಹಮೀದ್ ಕಂದಕ್ ಅವರು ಇಂದು ನಗರದ ವುಡ್ ಲ್ಯಾಂಡ್ ಹೊಟೇಲ್ ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಭಾಷಣ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಿದ್ದಾದರೂ ಚಿಕಿತ್ಸೆಗೂ ಮುನ್ನ ಮೃತ ಪಟ್ಟಿದ್ದಾರೆ.
ಹಮೀದ್ ಕಂದಕ್ ಅವರು ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಟ್ರಾವೆಲ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ಹಾಜಿ ಹಮೀದ್ ಕಂದಕ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದರು. ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳ ಹಾಗು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು.

