ಮಂಗಳೂರು: ಎಸ್ಕೆಸ್ಸೆಸೆಫ್ ವತಿಯಿಂದ ಸೌಹಾರ್ದತೆ ಸಾರುವ ಮಾನವ ಸರಪಳಿ ಕಾರ್ಯಕ್ರಮ ಜ.26 ರಂದು ಗುರುಪುರ ಕೈಕಂಬದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಎಸ್ಕೆಸ್ಸೆಸೆಫ್ ಸಿದ್ದೀಕ್ ಅಬ್ದುಲ್ ಖಾದರ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮ ಕೈಕಂಬದ ಬಾಲ್ಮಿ ಶಾಲೆ ಎದುರು ಮೈದಾನದಲ್ಲಿ ನಡೆಯಲಿದ್ದು, ಇದರಲ್ಲಿ 10 ಸಾವಿರ ಮಂದಿ ಭಾಗವಹಿಸುವ ನೀರಿಕ್ಷೆಯಿದೆ. ಕಾರ್ಯಕ್ರಮಕ್ಕೂ ಮುನ್ನ ಕೈಕಂಬದಿಂದ 3 ಗಂಟೆಗೆ ನಡೆಯುವ ಜಾಥಾವನ್ನು ಅಲ್ ಹಾಜಿ ವಿ.ಕೆ. ಅಬೂಬಕ್ಕರ್ ಮುಸ್ಲಿಯಾರ್ ಉದ್ಘಾಟಿಸಲಿದ್ದು, ಸಂಜೆ ನಡೆಯಲಿರುವ ಸಮಾರೋಪ ಸಮಾರಂಭವನ್ನು ಸಚಿವ ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಸಮಸ್ತ ಕೇಂದ್ರ ಮುಶಾವರ್ ಉಪಾಧ್ಯಕ್ಷ ಶೈಖುನಾ ಅಬ್ದುಲ್ ಜಬ್ಬಾರ್ ಮಿತ್ತಬೈಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅಥಿತಿಗಳಾಗಿ ಕೇಮಾರು ಮಠದ ಶ್ರೀ ವಿಠಲ ದಾಸ ಸ್ವಾಮೀಜಿ, ಕೈಕಂಬ ಪೊಂಪೈ ಚರ್ಚ್ ಧರ್ಮಗುರು ರ.ಫಾ.ಲೋಬೋ, ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ, ಶಾಸಕ ಮೊಹಿದ್ದೀನ್, ಬಾವಾ, ಜಿ.ಪಂ.ಸದಸ್ಯ ಯು.ಪಿ.ಇಬ್ರಾಹೀಂ, ಬಜಪೆ ಠಾಣೆಯ ವೃತ್ತ ನಿರೀಕ್ಷಕ ಪರಶಿವ ಮೂರ್ತಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದ ಅವರು, ಇದೇ ವೇಳೆ ದ.ಕ.ಜಿಲ್ಲಾ ಅಧ್ಯಕ್ಷ ಇಶಾಕ್ ಫೈಝಿ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಎಸ್ಕೆಸ್ಸೆಸೆಫ್ ದ.ಕ.ಜಿಲ್ಲಾ ಸಮಿತಿ ಉಪಾಧ್ಯಕ್ಷ ಖಾಸಿಂ ದಾರಿಮಿ, ಮಾನವ ಸರಪಳಿ ಸ್ವಾಗತ ಸಮಿತಿ ಅಧ್ಯಕ್ಷ ರಿಯಾನ್ ಮಿಲನ್, ಎಸ್ಕೆಸ್ಸೆಸೆಫ್ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ಯಮಾನಿ ಮತ್ತಿತರರಿದ್ದರು.

