ಗುರುಪುರ : ಜನವರಿ 28ರಂದು ಸಂಜೆ ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಗುರುಕೃಪ ಕಲಾ ಮಂದಿರದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಗುರುಪುರ(ಸರಕಾರಿ ಪದವಿ ಪೂರ್ವ ಕಾಲೇಜು ಗುರುಪುರ) ಉದ್ಘಾಟನೆಗೊಳ್ಳಲಿದೆ.
ಅಪರಾಹ್ನ 3 ಗಂಟೆಗೆ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ, 4ಕ್ಕೆ ಸಭಾ ಕಾರ್ಯಕ್ರಮ ಜರುಗಲಿದೆ. ಈ ಸಂದರ್ಭದಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗೌರವ ಸಮರ್ಪಣೆ ಆಯೋಜಿಸಲಾಗಿದೆ. ಸಂಜೆ 6ಕ್ಕೆ `ಗುರುದಯ’ ತಂಡದ `ರಂಗ್ದ ಕಲಾವಿದೆರ್ ಗುರುಪುರ ಇವರಿಂದ `ದಾಯೆ ಬದ್ಕೆರಾಪುಜಿ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ.
