ದಿಲ್ಲಿ: ಸಂಸತ್ ನಲ್ಲಿ ಬಜೆಟ್ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ನರೇಂದ್ರ ಮೋದಿ ಸರ್ಕಾರದ ಕೊನೆಯ ಪೂರ್ಣಾವಧಿಯ ಬಜೆಟ್ ಅಧಿವೇಶನ ಇದಾಗಿದೆ.
ಫೆ. 9ವರೆಗೆ ನಡೆಯಲಿರುವ ಸಂಸತ್ ನ ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿ ಫೆಬ್ರವರಿ 1 ರಂದು ರೇಂದ್ರ ಮೋದಿ ಸರ್ಕಾರದ ಕೊನೆಯ ಪೂರ್ಣಾವಧಿಯ ಬಜೆಟ್ ಮಂಡಿಸಲಿದ್ದಾರೆ.
ಪ್ರತ್ಯೇಕವಾಗಿ ಮಂಡಿಸಲಾಗುತ್ತಿದ್ದ ರೈಲ್ವೇ ಬಜೆಟ್ ಅನ್ನು ಕಳೆದ ವರ್ಷದಿಂದ ಸಾಮಾನ್ಯ ಬಜೆಟ್ ನೊಂದಿಗೆ ಸೇರಿಸಲಾಗಿದೆ.
ಅಧಿವೇಶನದಲ್ಲಿ ತ್ರಿವಳಿ ತಲಾಖ್ ರದ್ದು ಮಸೂದೆ ಅಂಗೀಕಾರ, ಮೋಟಾರ್ ವಾಹನ ಕಾಯ್ದೆ ತಿದ್ದುಪಡಿ ಮಸೂದೆ, ಗ್ರಾಹಕರ ರಕ್ಷಣೆ ಮಸೂದೆ , ಮಹಿಳೆಯರ ಮೇಲೆ ದೌರ್ಜನ್ಯ ವಿಚಾರ ಚರ್ಚೆಗೆ ಬರುವ ನಿರೀಕ್ಷೆ ಇದೆ.

