ಅಡ್ಡೂರು: ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು ಇದರ ನೂತನ ಕಚೇರಿ ಉದ್ಘಾಟನಾ ಸಮಾರಂಭ ಇಲ್ಲಿನ ಗರಡಿ ಜಂಕ್ಷನ್ ನಲ್ಲಿ ಜ.4ರಂದು ನಡೆಯಲಿದೆ.
ಇಂದು ಬೆಳಗ್ಗೆ 10;30ಕ್ಕೆ ನಡೆಯಲಿರುವ ನೂತನ ಕಟ್ಟಡ ಉದ್ಘಾಟನೆಯನ್ನು ಶಾಸಕ ಮೊಯ್ದಿನ್ ಬಾವಾ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಡ್ಡೂರು ಹಬೀಬ್ ಕಟ್ಟಪುಣಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯ ಯು.ಪಿ.ಬ್ರಾಹೀಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿರ್ದೇಶಕ ಪ್ರದೀಪ್ ಡಿಸೋಜಾ, ತಾ.ಪಂ. ಸದಸ್ಯ ಸಚಿನ್ ಅಡಪ, ಗುರುಪುರ ಗ್ರಾ.ಪಂ.ಅಧ್ಯಕ್ಷೆ ರುಕಿಯಾ, ಗುರುಪುರ ಗ್ರಾ.ಪಂ. ಉಪಾಧ್ಯಕ್ಷ ಉದಯ ಭಟ್, ರಾಜ್ಯ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಸುಹೈಲ್ ಕಂದಕ್ ಹಾಗೂ ಬಜ್ಪೆ ಸಬ್ ಇನ್ಸ್ ಸ್ಪೆಕ್ಟರ್ ರಾಜಾರಾಮ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಇದೇ ವೇಳೆ ಉಚಿತ ವೈದ್ಯಕೀಯ ಶಿಬಿರ, ಸಮಾಜ ಸೇವಕರಿಗೆ ಸನ್ಮಾನ, ಕ್ರೀಡಾ ಪಟುಗಳಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ವಿಶಿಷ್ಟ ಮಕ್ಕಳಿಗೆ ಪ್ರೋತ್ಸಾಹ ಧನ, ಮಹಿಳೆಯರಿಗೆ ಟೈಲರಿಂಗ್ ಯಂತ್ರ ಹಾಗೂ ತ್ಯಾಜ್ಯ ಸಂಗ್ರಹ ಬುಟ್ಟಿ ವಿತರಿಸಲಿದೆ ಎಂದು ಪ್ರಕಟನೆ ತಿಳಿಸಿದೆ.

