ಧಾರವಾಡ: ಟಾಟಾ ಏಸ್ ಹಾಗೂ ಸಾರಿಗೆ ಬಸ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಟಾಟಾ ಏಸ್ ನಲ್ಲಿದ್ದ ಮೂವರು ಗಂಭೀರ ಗಾಯಗೊಂಡು ಎಂಟಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ.
ಹುಬ್ಬಳ್ಳಿ ಕಡೆಯಿಂದ ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳುತ್ತಿದ್ದ ಟಾಟಾ ಏಸ್ ಗೆ ಎದುರಿಗೆ ಬರುತ್ತಿದ್ದ ಸಾರಿಗೆ ಬಸ್ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಗಾಯಗೊಂಡವರು ಯಾವ ಊರಿನವರು ಎಂಬುದು ಗೊತ್ತಾಗಿಲ್ಲ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

