ರಾಜಸ್ಥಾನ: ಭೀಕರ ರಸ್ತೆ ಅಪಘಾತದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾಬೆನ್ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಕೋಟಾ-ಚಿತ್ತೋರ್ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ.
ಕೋಟಾದಲ್ಲಿ ಸಮಾರಂಭವೊಂದಕ್ಕೆ ಹೋಗಿ ವಾಪಾಸ್ಸಾಗುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಇದರಲ್ಲಿ ಓರ್ವರು ಮೃತಪಟ್ಟಿದ್ದು, ಮೋದಿಯವರ ಪತ್ನಿ ಜಶೋದಾಬೆನ್ ಅವರ ತಲೆ ಭಾಗಕ್ಕೆ ಗಂಭೀರಗಾಯಗೊಂಡಿದೆ. ಅವರನ್ನು ಸ್ಥಳೀಯ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

