ಪುಣೆ: ಸಾಕು ಮಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮಲ ತಂದೆಯೊಬ್ಬನನ್ನು ಮಹಾರಾಷ್ಟ್ರದ ಪುಣೆಯ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಏನಿದು ಪ್ರಕರಣ: ಪುಣೆಯ ವಾರ್ಜ ನಿವಾಸಿ ಮಹಿಳೆಯೋರ್ವರ ಪತಿ ಕುಡಿದ ಮತ್ತಿನಲ್ಲಿದ್ದ ಪತಿ, ಪತ್ನಿಯೊಂದಿಗೆ ಲೈಂಗಿಕ ಸಂಪರ್ಕ ಮಾಡಲು ಮುಂದಾಗಿದ್ದು, ಇದಕ್ಕೆ ಒಪ್ಪದ ಪತ್ನಿಯ ಮೂರು ವರ್ಷದ ಸಾಕು ಮಗಳನ್ನು ಹೊರಗಡೆ ಕರೆದೊಯ್ದು ಅತ್ಯಾಚಾರ ವೆಸಗಿದ್ದಾನೆ. ಇದರಿಂದ ತೀವ್ರ ಆಕ್ರೋಶಗೊಂಡ ಆಕೆ ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಆತನನ್ನು ಪೋಸ್ಕೋ ಕಾಯ್ದೆಯಡಿ ಬಂಧಿಸಲಾಗಿದೆ.

