ಬೆಂಗಳೂರು: ಮಠಗಳನ್ನು ಮುಜರಾಯಿ ವ್ಯಾಪ್ತಿಗೆ ಒಳಪಡಿಸುವುದಿಲ್ಲ. ಮಠಗಳ ಉಸ್ತುವಾರಿ ನಮಗೆ ಬೇಡ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದು ಪರಿಷತನಲ್ಲಿ ಸ್ಪಷ್ಟಪಡಿಸಿದ್ದಾರೆ.
ಪರಿಷತ್ ಕಲಾಪದಲ್ಲಿ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರಶ್ನೆಗೆ ಅವರಿಗೆ ಉತ್ತರ ನೀಡಿದ ಅವರು, ಮಠಗಳನ್ನು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡಿಸುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದರು.
ಮಠ, ದೇಗುಲಗಳನ್ನು ನಾವು ತೆಗೆದುಕೊಂಡು ಏನು ಮಾಡುವುದು ಎಂದು ಪ್ರಶ್ನಿಸಿದ ಅವರು ಮಠಗಳನ್ನು ಮುಜರಾಯಿ ಇಲಾಖೆಗೆ ಒಳಪಡಿಸುವ ಉದ್ದೇಶವೂ ಸರಕಾರಕ್ಕೆ ಇಲ್ಲ ಉಬಯ ಸದನಗಳಲ್ಲಿ ಚರ್ಚೆ ಬಳಿಕ ಸರಕಾರ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

