654165

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ 5 ಅಂತಸ್ತಿನ ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಕಾರ್ಮಿಕ ಸಾವನ್ನಪ್ಪಿದ್ದರೆ, ಕನಿಷ್ಠ 20 ಮಂದಿ ಕಾರ್ಮಿಕರು ಕಟ್ಟಡದ ಅವಶೇಷದ ಅಡಿ ಸಿಲುಕಿರುವ ಘಟನೆ ನಗರದ ಸರ್ಜಾಪುರ ರಸ್ತೆಯ ಕಸವನಹಳ್ಳಿಯಲ್ಲಿ ಗುರುವಾರ ನಡೆದಿದೆ.

 ಈ ಕಟ್ಟಡ ರಫೀಕ್  ಎಂಬವರಿಗೆ ಸೇರಿದ್ದು, ಆಂಧ್ರ ಮೂಲದ ಕೃಷ್ಣಾರೆಡ್ಡಿ ಎಂಬುವರ ಮೇಲುಸ್ತುವಾರಿಯಲ್ಲಿ ಕಟ್ಟಡ ಕಾಮಗಾರಿ ನಡೆಯುತಿತ್ತು. ಕಾಮಗಾರಿ ನಡೆಯುತ್ತಿದ್ದ ವೇಳೆ ಕುಸಿದಿದ್ದು, ಕಟ್ಟಡದ ಒಳಗೆ ಸುಮಾರು 25 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದ್ದು, 8 ಜನ ಕಾರ್ಮಿಕರನ್ನು ಈಗಾಗಲೇ ಸ್ಥಳೀಯರು ರಕ್ಷಿಸಿದ್ದಾರೆ. ಇನ್ನೂ ಸಾಕಷ್ಟು ಜನ ಕಾರ್ಮಿಕರು ಅವಶೇಷದ ಅಡಿ ಸಿಲುಕಿದ್ದಾರೆ, ಸಾವು ನೋವು ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

 ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಧಾವಿಸಿದ್ದು, ಸ್ಥಳೀಯರ ಸಹಾಯದೊಂದಿಗೆ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಮಾಡುತ್ತಿದ್ದಾರೆ. ರಕ್ಷಿಸಲ್ಪಟ್ಟ ಕಾರ್ಮಿಕರನ್ನು ಸೇಂಟ್ ಜೋನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 ಸುದ್ದಿ ತಿಲಿದು ಸ್ಥಳಕ್ಕೆ ಬಿಬಿಎಂಪಿ ಮೇಯರ್ ಸಂಪತ್ರಾಜ್ ಭೇಟಿ ನೀಡಿದ್ದು, ಅಗ್ನಿಶಾಮಕ ದಳದ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಎಲ್ಲ ವ್ಯಕ್ತಿಗಳ ಆಸ್ಪತ್ರೆಯ ಖರ್ಚು ಭರಿಸುವುದಾಗಿ ಹೇಳಿರುವ ಅವರು, ಮೃತರ ಕುಟುಂಬಕ್ಕೆ ಪರಿಹಾರವನ್ನೂ ಘೋಷಿಸಿಸುವುದಾಗಿ ಭರವಸೆ ನೀಡಿದ್ದಾರೆ.

 ಈ ಬಗ್ಗೆ ಕಟ್ಟಡದ ಎಂಜಿನಿಯರ್ ಮತ್ತು ಮಾಲೀಕರ ಮೇಲೆ ಪೊಲೀಸರು ದೂರು ದಾಖಲಿಸಲಿದ್ದಾರೆ.

By Suddi9

Leave a Reply

Your email address will not be published. Required fields are marked *