8be8eb3e051d0f002a9cff5f21f59ce6

ಸುಬ್ರಹ್ಮಣ್ಯ: ಕೇಂದ್ರ ಸರಕಾರ ಏನು ಮಾಡಿದೆ ಎಂದು ಸಿದ್ದರಾಮಯ್ಯ ಪ್ರಶ್ನಿಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಸರಕಾರ ಏನು ಮಾಡಿದೆ  ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರಶ್ನಿಸಿದ್ದಾರೆ.

ಸೋಮವಾರ ಇಲ್ಲಿನ ಕುಲ್ಕುಂದದಲ್ಲಿ ಬಿಜೆಪಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಆಯೋಜಿಸಿದ್ದ ನವ ಕರ್ನಾಟಕ ನಿರ್ಮಾಣಕ್ಕಾಗಿ ‘ನವಶಕ್ತಿ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಸಕ ಹಾರಿಸ್ ಪುತ್ರನ ಗೂಂಡಾವರ್ತನೆಯನ್ನು ಪ್ರಸ್ತಾಪಿಸಿದ ಶಾ, ಇದು ಸರಕಾರದ ತುಷ್ಟೀಕರಣಕ್ಕೆ ನೀತಿಗೆ ಉದಾಹರಣ ಎಂದವರು, ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದ ಅವರು, ಸಿದ್ದರಾಮಯ್ಯ ಸರಕಾರದಲ್ಲಿ ಭ್ರಷ್ಟಾಚಾರಿಗಳಿದ್ದಾರೆ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ಈ ಗೆಲುವು ದಕ್ಷಿಣ ಭಾರತದಲ್ಲಿ ಪಕ್ಷದ ಗೆಲುವಿಗೆ ಹೆಬ್ಬಾಗಿಲು ಆಗಲಿದೆ ಎಂದು ಭವಿಷ್ಯ ನುಡಿದರು.

1452

ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್, ಶಾಸಕರಾದ ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮತ್ತಿತರರು ಉಪಸ್ಥಿತರಿದ್ದರು.

 

 

By suddi9

Leave a Reply

Your email address will not be published. Required fields are marked *