0a169af5

ಹುಬ್ಬಳ್ಳಿ: ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ  150 ಸೀಟು ಗೆದ್ದೆ, ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವ ಅನಂತಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿನ ನೆಹರು ಮೈದಾನದಲ್ಲಿ ಮಂಗಳವಾರ ಸಂಜೆ ನಡೆದ ಅಭಿನಂದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಈ ಸಲ ಬಿಜೆಪಿ ಅಧಿಕಾರ ಹಿಡಿಯುದು ಶತಸಿದ್ದ, ಸಿಎಂ ಸಿದ್ದರಾಮಯ್ಯ ಸರ್ಕಾರದ ಕೌಂಟ್‌ಡೌನ್ ಶುರುವಾಗಿದೆ ಎಂದರು.

ಕೇಂದ್ರ ಸಚಿವರಾದ ನಿತಿನ್ ಗಡ್ಕರಿಯ ರಾಜ್ಯದ ಹೆದ್ದಾರಿಗಳ ಅಭಿವೃದ್ಧಿಗೆ ಸಾಕಷ್ಟು ಹಣಕಾಸಿನ ನೆರವು ನೀಡಿದ್ದಾರೆ. ಅವರಿಗೆ ರಾಜ್ಯದ ಜನರ ಪರವಾಗಿ ಹಾರ್ದಿಕ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ನರೇಂದ್ರ ಮೋದಿಯವರ ಸರ್ಕಾರ ರಾಜ್ಯಕ್ಕೆ ಅತಿ ಹೆಚ್ಚು ಅನುದಾನ ನೀಡಿದೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಬಣ್ಣಿಸಿದರು.

ಸಂಸದ ಪ್ರಹ್ಲಾದ್ ಜೋಶಿ,ವಿಪಕ್ಷ ನಾಯಕ ಜಗದೀಶ್ ಶೆಟ್ಟರ್‌,ಶಾಸಕ ಅರವಿಂದ ಬೆಲ್ಲದ,ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್‌, ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಇತರರು ಇದ್ದರು.

By Suddi9

Leave a Reply

Your email address will not be published. Required fields are marked *