Murder-1024x768

ಬಂಟ್ವಾಳ: ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದ ಯುವಕನೋರ್ವನಿಗೆ ಚೂರಿ ಇರಿತದಲ್ಲಿ ಕೊನೆಗೊಂಡ ಘಟನೆ ತಾಲೂಕಿನ ಫರಂಗಿಪೇಟೆಯಲ್ಲಿ ಬುದವಾರ ರಾತ್ರಿ ನಡೆದಿದೆ.

ಫರಂಗಿಪೇಟೆಯ ನಿವಾಸಿ ಇರ್ಫಾನ್ ಇರಿತಕ್ಕೊಳಗಾದ ಯುವಕ ಎಂದು ಗುರುತಿಸಲಾಗಿದೆ.

ಫರಂಗಿಪೇಟೆಯ ಒಳಮಾರ್ಗದ ನದಿತಟದಲ್ಲಿ ಈ ಘಟನೆ ನಡೆದಿದೆ. ಇನ್ನು ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನದಿ ತಟದಲ್ಲಿ ಚಾಕು ಹಾಗೂ ರಕ್ತಸಿಕ್ತ ವಸ್ತುಗಳನ್ನು ಕಂಡ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *