ಮುಂಬಯಿ: ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ಶನಿವಾರ ತಡರಾತ್ರಿ ದುಬೈನಲ್ಲಿ ಮೃತಪಟ್ಟಿದ್ದಾರೆ.
54 ವರ್ಷದ ಬಹುಭಾಷಾ ನಟಿ ಶ್ರೀದೇವಿ, ತಮ್ಮ ಸಂಬಂಧಿಕರೊಬ್ಬರ ವಿವಾಹ ಸಮಾರಂಭದಲ್ಲಿ ಪಾಲ್ಗೋಳ್ಳಲು ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಕಿರಿಯ ಮಗಳು ಖುಷಿ ಜೊತೆ ದುಬೈಗೆ ತೆರಳಿದ್ದರು. ಈ ವೇಳೆ ಮೃತಪಟ್ಟಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಬಾಲಿವುಡ್ನ ಖ್ಯಾತ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. 1978ರಲ್ಲಿ ಸೊಲ್ವ ಸಾವನ್ ಸಿನಿಮಾ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ಶ್ರೀದೇವಿ ಸುಮಾರು 215 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಮುಂಬೈನ ಅಂಧೇರಿಯಲ್ಲಿರುವ ಶ್ರೀದೇವಿ ಅವರ ನಿವಾಸದೆದರು ನೆರೆಯುತ್ತಿದ್ದಾರೆ.
ರಾತ್ರಿ 11.30 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿರುವ ಶ್ರೀದೇವಿ ಅವರ ಪಾರ್ಥೀವ ಶರೀರವನ್ನು ವಿಶೇಷ ವಿಮಾನದ ಮೂಲಕ ಭಾರತಕ್ಕೆ ತರಲಾಗುವುದು.

