ದಿಲ್ಲಿ: 1996-98ರವರೆಗೆ ಕ್ಯಾಬಿನೆಟ್ ಕಾರ್ಯದರ್ಶಿಗಳಾಗಿ ಸೇವೆಸಲ್ಲಿಸುತ್ತಿದ್ದ ಟಿಎಸ್ ಆರ್ ಸುಬ್ರಮಣಿಯನ್ ಅನಾರೋಗ್ಯದಿಂದ ಸೋಮವಾರ ದೆಹಲಿಯಲ್ಲಿ ನಿಧನರಾಗಿದ್ದಾರೆ.
ಸುಬ್ರಮಣಿಯನ್ ನಿಧನಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಆಂತರಿಕ ವ್ಯವಹಾರಗಳ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದು, ಅವರ ಅಂತ್ಯಕ್ರಿಯೆ ಇಂದು ಸಂಜೆ 5ಕ್ಕೆ ನಡೆಯಲಿದೆ ಎಂದು ಮಾಹಿತಿ ತಿಳಿದು ಬಂದಿದೆ.

