DW8ObWpVMAIrW_3-300x169

ಕಲಬುರಗಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ವಿಧಾನ ಸಭೆ ಚುನಾವಣೆಯಲ್ಲಿ  ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಕಲಬುರಗಿ ಬಿಎಸ್ ಎಸ್ ಸಕ್ಕರೆ ಕಾರ್ಖಾನೆಯನ್ನು ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಪ್ರಾರಂಭಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಎಲ್ಲ ಕ್ಷೇತ್ರದಲ್ಲಿ ವಿಫಲವಾಗಿದೆ. ರಾಜ್ಯ ಸರ್ಕಾರ ಗುಂಡಾಗಿರಿಯಲ್ಲಿ ತೊಡಗಿದೆ. ಕರ್ನಾಟಕ ದಲ್ಲಿ ಹಿಂದುಳಿದ ಪ್ರದೇಶ ನೋಡಬೇಕಾದರೆ ಅದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕ್ಷೇತ್ರದಲ್ಲಿ ಕಾಣುತ್ತದೆ ಎಂದು ದೂರಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಕ್ಷೇತ್ರದಲ್ಲಿ ಯಾವುದೆ ಅಭಿವೃದ್ಧಿಯಾಗಿಲ್ಲ. ಕರ್ನಾಟಕ ದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರ ಕೈಯಲ್ಲಿ ಇರುವ ೪೦ ಲಕ್ಷದ ಕೈಗಡಿಯಾರ ವೇ ಸಾಕ್ಷಿ ಎಂದು ಆರೋಪಿಸಿದರು.

 

 

By Suddi9

Leave a Reply

Your email address will not be published. Required fields are marked *