pic

ಬೆಳಗಾವಿ:  ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಮೂವರು ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೇ ಯಡಿಯೂರಪ್ಪ ಯಾವ ಅಭಿವೃದ್ಧಿ ಕಾರ್ಯ ಮಾಡದೆ ಜೈಲಿಗೆ ಹೋಗಿ ಬರೋದರಲ್ಲಿ ಸಾಧನೆ ಮಾಡಿದ್ದಾರೆ. ಇಂತವರು ನಮ್ಮ ರಾಜ್ಯದ ಮುಖ್ಯಮಂತ್ರಿಯಾಗಲು ಯೋಗ್ಯರಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಎಸ್ ವೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಲ್ಲಿನ ಸವದತ್ತಿ ಜನಾಶೀರ್ವಾದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ಜನಪರವಾದ ಸರ್ಕಾರವಾಗಿದ್ದು, ಮತ್ತೆ ನಾವೇ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ಮೇಣುಗೋಪಾಲ, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಶಾಸಕ ಹಾಗೂ ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ, ಸಚಿವ ಸಂತೋಷ ಲಾಡ್, ಡಿ.ಕೆ. ಶಿವಕುಮಾರ್, ಎಂ. ಬಿ. ಪಾಟೀಲ್ ಕೆಪಿಸಿಸಿ ಮಹಿಳಾ ರಾಜ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರರಿದ್ದರು.

 

By Suddi9

Leave a Reply

Your email address will not be published. Required fields are marked *