ಹಿಮಾಚಲ ಪ್ರದೇಶ: ಬಾಲಕಿ ಮೇಲೆ ಕಾಮುಕನೋರ್ವ ಅತ್ಯಾಚಾರವೆಸಗಿದ ಘಟನೆ ಇಲ್ಲಿನ ಶಿಮ್ಲಾದಲ್ಲಿ ನಡೆದಿದೆ.
ಮೂರೂವರೆ ವರ್ಷದ ಬಾಲಕಿ ಮೇಲೆ 25 ಹರೆಯದ ಕಾಮುಕ ಬಂಟಿ ಎಂಬಾತ ಅತ್ಯಾಚಾರ ನಡೆಸಿದ್ದು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಂತ್ರಸ್ತೆ ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸದ್ಯ ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಪರೀಕ್ಷೆಗಾಗಿ ತಂಡಾ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

